ಶಿವಮೊಗ್ಗ: ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿನ ಸಂಸ್ಕೃತಿ, ಸಚಿವ ಜಮೀರ್ ಅಹಮದ್ ಅವರ ಧೋರಣೆ ಹೊಂದಿಕೊಳ್ಳಲ್ಲ. ಹೀಗಾಗಿಯೇ ಶೆಟ್ಟರ್ ಹೊರಗೆ ಬರುತ್ತಾರೆ. ಖಂಡಿತ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಸುಸಂಸ್ಕೃತ ಕುಟುಂಬ. ಹಿಂದು ಸಮಾಜ ರಕ್ತಗತ ಮಾಡಿಕೊಂಡ ಕುಟುಂಬ. ಜಗದೀಶ್ ಶೆಟ್ಟರ್ ತಂದೆ ಹುಬ್ಬಳ್ಳಿ ಮೇಯರ್, ಶಾಸಕರಾಗಿದ್ದರು. ಕೆಲ ಕಾರಣಗಳಿಗಾಗಿ ಶೆಟ್ಟರ್ ಕಾಂಗ್ರೆಸ್ ಗೆ ಹೋಗಿದ್ದಾರೆ. ಆದರೆ ಅಲ್ಲಿನ ಸಂಸ್ಕೃತಿ ಶೆಟ್ಟರ್ ಅವರಿಗೆ ಸರಿ ಬರುವುದಿಲ್ಲ. ಖಂಡಿತ ಅವರು ಬಿಜೆಪಿಗೆ ಹಿಂದಿರುಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.