ರಾಜ್ಯ

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ‌ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್‌ ಧನಕರ್‌ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಆರೋಪಿಸಿದರು.

ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಲ್ಲಿ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಮುಗಮ್ಮಾಗಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ಡಾ.ಪಾಟೀಲ್‌ ದೂರಿದರು.

ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಸಚಿವರು ಟೀಕಿಸಿದರು.

ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ
ನಮ್ಮ ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಳಿಂದ ಕರ್ನಾಟಕದಲ್ಲಿ ತಲಾದಾಯ ಹೆಚ್ಚಾಗಿದೆ. ನಾವೀಗ ದೇಶಕ್ಕೆ ನಂಬರ್ ಒನ್‌ ಸ್ಥಾನದಲ್ಲಿದ್ದೇವೆ ಎಂದು ಸಚಿವರು ತಿಳಿಸಿದರು.
50 ಸಾವಿರ ಕೋಟಿ ಹಣ ನೇರವಾಗಿ ಜನರಿಗೆ ತಲುಪುತ್ತಿದೆ. ಕರ್ನಾಟಕದಲ್ಲಿ ಜನಸ್ನೇಹಿ ಸರಕಾರವಿದೆ. ಜನೋಪಯೋಗಿ ಆರ್ಥಿಕ ನೀತಿಗಳಿಂದ ಸುಧಾರಣೆಯಾಗುತ್ತಿದೆ. ನಮ್ಮ ಕಾಂಗ್ರೆಸ್ ಅಧಿಕಾರದಲ್ಲಿ ಭೂ ಸುಧಾರಣಾ ಕಾಯಿದೆ ಸೇರಿದಂತೆ ಒಳ್ಳೊಳ್ಳೆ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಇದು ತಲಾದಾಯ ಹೆಚ್ಚಳಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರಣವಾಗಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.

ಜಿಎಸ್‌ಟಿ ಕೇಂದ್ರದ ನಿರ್ಧಾರ
ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ ನೀಡಿರುವ ನಿರ್ಧಾರ ಕೇಂದ್ರ ಸರ್ಕಾರದ ನಿರ್ಣಯದಂತೆ ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜಿಎಸ್‌ಟಿ ಮಂಡಳಿ ಮುಖ್ಯಸ್ಥರು ಹಣಕಾಸು ಸಚಿವರು. ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಇಂಪ್ಲಿಮೆಂಟ್‌ ಮಾಡಲಾಗುತ್ತದೆ. ಜಿಎಸ್ ಟಿ ಎಲ್ಲವನ್ನು ಕೇಂದ್ರ ಸರ್ಕಾರ ಕಲೆಕ್ಟ್ ಮಾಡುತ್ತೆ, ಬಳಿಕ ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ನಾವು ಹೇಗೆ ನೊಟೀಸ್ ಕೊಡಲು ಸಾಧ್ಯ? ಎಲ್ಲ ನಿರ್ಧಾರವನ್ನು ಕೇಂದ್ರ ಸರಕಾರವೇ ಮಾಡಿದೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

9 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

58 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago