ಬೆಂಗಳೂರು: ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.
ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.
ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.
ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.
ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.
ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.
ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.
ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…