ರಾಜ್ಯ

ಜಗದೀಶ್‌ ಶೆಟ್ಟರ್‌ ಬಿಜೆಪಿ ಸೇರ್ಪಡೆ: ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ ಎಂದ ಡಿಕೆಶಿ!

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು.

ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು ಎಂದರು.

ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು.

ನಾವು ಅವರ ಮೆಲೆ ಇಟ್ಟದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ. ವಿಧಾನ ಪರಿಷತ್ ಸಭಾಪತಿಗಳಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಅಧಿಕಾರಿಗಳ ಮೂಲಕ ಮಾಹಿತಿ ಬಂದಿದೆ.

ಅವರನ್ನು ಒತ್ತಡದ ಹಾಕಿ ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

ಶೆಟ್ಟರ್ ಅವರು ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ಟಿಕೆಟ್ ತಪ್ಪಿದಾಗ ದೇಶದ ಹಿತಾಸಕ್ತಿ ಗೊತ್ತಿರಲಿಲ್ಲವೇ? ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದಾಗ ದೇಶದ ಹಿತ ಗೊತ್ತಿರಲಿಲ್ಲವೇ” ಎಂದು ಮರುಪ್ರಶ್ನಿಸಿದರು.

ಅವರಿಗೆ ಆಮಿಷ ಒಡ್ಡಲಾಗಿದೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ಅವರೇ ಹೇಳಬೇಕು. ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿದೆ. ನಮಗೂ ಆತ್ಮಸಾಕ್ಷಿ ಇದೆ.

ಅವರಿಗೂ ಆತ್ಮಸಾಕ್ಷಿ ಇದೆ. ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯೇ ಬೇರೆ, ಬಿಜೆಪಿ ಕಾರ್ಯವೈಖರಿಯೇ ಬೇರೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅವರಿಗೆ ಬಿ ಫಾರಂ ಕೊಟ್ಟಿದ್ದೆ. ನನಗೆ ಅವರ ರಾಜೀನಾಮೆ ಪತ್ರ ತಲುಪಿಲ್ಲ” ಎಂದು ತಿಳಿಸಿದರು.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

8 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

9 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

9 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

10 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

10 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

14 hours ago