ರಾಜ್ಯ

ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.

ಇಂದು ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಕುಂದಾನಗರಿ ಬೆಳಗಾವಿಯ ಸಿಪಿಇಡಿ ಮೈದಾನವು ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧವಾಗಿದೆ.

1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ.

ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಇನ್ನು ಈ ಸಮಾವೇಶಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಅನಾರೋಗ್ಯದ ಕಾರಣ ಗೈರಾಗಿದ್ದಾರೆ. ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದಾರೆ.

ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 3500ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

32 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

6 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

6 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

6 hours ago