ರಾಜ್ಯ

ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಐತಿಹಾಸಿಕ ಸಮಾವೇಶವಾಗಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್‌, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಾವೇಶಕ್ಕೆ 2 ಲಕ್ಷಕ್ಕೂ ಅಧಿಕ ಜನ ಸೇರಲಿದ್ದು, ಶತಮಾನೋತ್ಸವದ ನೆನಪಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸಚಿವ ರಣದೀಪ್‌ ಸಿಂಗ್‌ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್‌ ಈ ಸಮಾವೇಶದ ಸಿದ್ದತೆ ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.

ಮಹಾತ್ಮ ಗಾಂಧೀಜಿ ಮತ್ತು ಬಿ.ಆರ್‌.ಅಂಬೇಡ್ಕರ್‌ ಅವರ ತತ್ವ ಆದರ್ಶಗಳನ್ನು ಜನರಿಗೆ ತಿಳಿಸುವ ಆಗತ್ಯವಿದೆ. ನಾವು ಈಗಿರಲು ಕಾರಣವೇ ಸಂವಿಧಾನ. ನಾವು ಸಂವಿಧಾನದ ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುಶಃ ಜೋಶಿ ಅವರಿಗೆ ಇತಿಹಾಸ ತಿಳಿದಿಲ್ಲ ಅನಿಸುತ್ತದೆ. ಸಂವಿಧಾನದ ಬಗ್ಗೆ ಸಾವರ್ಕರ್‌, ಗೋಲ್ವಾಲ್ಕರ್‌ ಅವರಗಿರುವ ಅಭಿಪ್ರಾಯ ಇವರಿಗೆ ತಿಳಿದಿಲ್ಲವೇನೊ ಎಂದು ಪ್ರಶ್ನಿಸಿದರು.

ಇನ್ನು ʼಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರ ಇದೆʼ ಎಂಬ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಇವರು ಇತಿಹಾಸ ಓದಿಯೇ ಇಲ್ಲ ಹಾಗಾಗಿಯೇ ಈ ರೀತಿ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

1 hour ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

1 hour ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

2 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago