ರಾಜ್ಯ

ದೇಶದಲ್ಲಿ ಎಲ್ಲಾ ಸಮುದಾಯಗಳು ಸೌಹಾರ್ದತೆಯಿಂದ ಬಾಳಲಿ, ಸಿಎಂ ಆರೋಗ್ಯ ಸುಧಾರಿಸಲು ವಿಶೇಷ ಪ್ರಾರ್ಥನೆ: ಜಮೀರ್‌

ಬೆಂಗಳೂರು: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಹಾಗೂ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಸುಧಾರಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಸಚಿವ ಬಿ.ಜೆಡ್‌.ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು(ಮಾರ್ಚ್.‌31) ರಂಜಾನ್‌ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಜನತೆಗೆ ರಂಜಾನ್‌ ಹಬ್ಬದ ಹಾರ್ದಿಕ ಶುಭಾಶಯಗಳು. ಮೂವತ್ತು ದಿನಗಳ ಕಾಲ ಉಪವಾಸದಿಂದ ಇದ್ದೇವೆ. ನಿನ್ನೆ ಹಿಂದೂಗಳಿಗೆ ಹೊಸ ವರ್ಷವಾಗಿರುವ ಯುಗಾದಿ ಹಬ್ಬವಾದರೆ, ಇಂದು ನಮಗೆ ರಂಜಾನ್‌ ದೊಡ್ಡ ಹಬ್ಬವಾಗಿದೆ. ಈ ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಹಾಗೂ ಸಿಖ್‌ ಧರ್ಮದ ಸಮುದಾಯಗಳೆಲ್ಲವೂ ಅನ್ಯೋನ್ಯತೆಯಿಂದ ಬಾಳಲಿ ಎಂದು ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೇಳಿದರು.

ಇನ್ನು ಇಂದು ಸುಮಾರು ಬೆಳಿಗ್ಗೆ 9.35 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರ ಫೋನ್‌ ಮಾಡಿ ರಂಜಾನ್‌ ಹಬ್ಬದ ವಿಶ್‌ ಮಾಡಿದ್ದಾರೆ. ಅಲ್ಲದೇ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಈ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಹೀಗಾಗಿ ಅವರ ಆರೋಗ್ಯ ಆದಷ್ಟು ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥನೆ ಸಲ್ಲಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಮುಸ್ಲಿಂ ಭಾಂದವರು ಕಪ್ಪು ಪಟ್ಟಿ ಧರಿಸಿ ಸಾಮಾಹಿಕ ಪ್ರಾರ್ಥನೆ ಸಲ್ಲಿಸಿರುವ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಇವತ್ತು ಕಪ್ಪು ಪಟ್ಟಿ ಧರಿಸಿದ್ದೇವೆ. ವಕ್ಫ್ ಮಸೂದೆ ತರಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ. ಆದರೆ ಇದಕ್ಕೆ ನಮ್ಮ ರಾಜ್ಯ ಸರ್ಕಾರದಿಂದ ಬೆಂಬಲವಿಲ್ಲ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

33 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago