ರಾಜ್ಯ

ಜನಕಲ್ಯಾಣ ಸಮಾವೇಶ: ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಪ್ರತಿಕ್ರಿಯೆ

ಹಾಸನ: ಕಾಂಗ್ರೆಸ್‌ ಸರ್ಕಾರದಿಂದ ನಾಳೆ(ಡಿ.5) ನಡೆಸಲಾಗುವ ಜನಕಲ್ಯಾಣ ಸಮಾವೇಶದ ಕುರಿತು ಮೊದಲ ಬಾರಿಗೆ ಹೊಳೆನರಸೀಪುರದ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಇಂದು(ಡಿ.4) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಲ್ಲಿ ಕಾಂಗ್ರೆಸ್‌ ಸರ್ಕಾರ ಸಮಾವೇಶ ಮಾಡಿದರೆ ಮಾಡಿಕೊಳ್ಳಲಿ. ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಈ ಸಮಾವೇಶಕ್ಕೆ 2028ರ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಹಾಸನದಲ್ಲಿ ಜೆಡಿಎಸ್‌ ಅನ್ನು ಟಾರ್ಗೆಟ್‌ ಮಾಡಿದರೆ ಮಾಡಲಿ. 50 ವರ್ಷಗಳಿಂದ ನಮ್ಮ ಜಿಲ್ಲೆಗೆ ಕಾಂಗ್ರೆಸ್‌ನಿಂದ ಯಾವ ಕೊಡುಗೆಯೂ ಇಲ್ಲ. 2018ರ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಏನಾಯ್ತು? ಕಾಂಗ್ರೆಸ್‌ನವರು ಕೊನೆಗೆ ಎಚ್‌.ಡಿ.ದೇವೇಗೌಡರ ಬಳಿ ಬರಬೇಕಾಯ್ತು. ಮುಂದಿನ ಚುನಾವಣೆಗೆ ಹಾಸನದಲ್ಲಿ ನಾವು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಸೇರಿ ಮತ್ತೆ ಜೆಡಿಎಸ್‌ ಅನ್ನು ಅಧಿಕಾರಕ್ಕೆ ತಂದೇ ತರುತ್ತೇವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

15 mins ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

24 mins ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

46 mins ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

57 mins ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

2 hours ago

ಮಡಿಕೇರಿ | ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್

ಮಡಿಕೇರಿ : ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…

2 hours ago