Mysore
14
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹಿಸಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿದ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ.

ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.

ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್‌ ಖಂಡಿಸಿ ಹಾಗೂ ಪಂಚಮಸಾಲಿಗಳ ಹೋರಾಟ ಸಂವಿಧಾನ ವಿರೋಧಿ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪಂಚಮಸಾಲಿ ಮುಖಂಡರು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು.

ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ಧರಣಿ ನಡೆಸಲು ಅವಕಾಶ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಹೋರಾಟಗಾರರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ಹೋರಾಟ ತಡೆಯುವುದು ಅವರ ಹವ್ಯಾಸ. ಆದರೆ ಹೋರಾಟ ಮಾಡುವುದು ನಮ್ಮ ಆದ್ಯ ಕರ್ತವ್ಯ. ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಲಾಠಿ ಚಾರ್ಜ್‌ ಮಾಡಿರುವ ಪೊಲೀಸ್‌ ಸಿಬ್ಬಂದಿಯನ್ನು ಸಸ್ಪೆಂಡ್‌ ಮಾಡಬೇಕು ಎಂದು ಒತ್ತಾಯಿಸಿದರು.

 

 

Tags:
error: Content is protected !!