ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿದ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ.
ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಕ್ಷಮೆ ಕೋರುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.
ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಹಾಗೂ ಪಂಚಮಸಾಲಿಗಳ ಹೋರಾಟ ಸಂವಿಧಾನ ವಿರೋಧಿ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯುವಂತೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಪಂಚಮಸಾಲಿ ಮುಖಂಡರು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದರು.
ಈ ವೇಳೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಧರಣಿ ನಡೆಸಲು ಅವಕಾಶ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಹೋರಾಟಗಾರರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು, ಹೋರಾಟ ತಡೆಯುವುದು ಅವರ ಹವ್ಯಾಸ. ಆದರೆ ಹೋರಾಟ ಮಾಡುವುದು ನಮ್ಮ ಆದ್ಯ ಕರ್ತವ್ಯ. ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಲಾಠಿ ಚಾರ್ಜ್ ಮಾಡಿರುವ ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…