ಬೆಳಗಾವಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಘಟನೆಯಲ್ಲಿ 12 ಮಂದಿ ಪೊಲೀಸರು ಹಾಗೂ 6 ಮಂದಿ ಹೋರಾಟಗಾರರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಬೆಳಗಾವಿ ಬಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಪಂಚಮಸಾಲಿ ಹೋರಾಟ ಶಾಂತಿಯುತವಾಗಿತ್ತು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಬರಬೇಕು ಎಂದು ಆಗ್ರಹ ಇತ್ತು. ಆದ್ರೆ ಸ್ಥಳಕ್ಕೆ ಬಂದ ಸಚಿವರ ಮಾತು ಸಮಾಧಾನ ತರಲಿಲ್ಲ. ಹಾಗಾಗಿ ನಾವು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದೆವು. ಆದ್ರೆ ಅಲ್ಲಿದ್ದ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಲಾಠಿ ಚಾರ್ಜ್‌ನಿಂದ ಬಹಳಷ್ಟು ಜನರ ಕೈಕಾಲು ಮುರಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.





