ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯ ರಾಜ್ಯ ಘಟಕವು ವಿಡಂಬನಾತ್ಮಕ ವಿಡಿಯೋ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಆಮ್ ಆದ್ಮಿ ಪಾರ್ಟಿಯ ಡಿ.ಎಸ್.ಸಚಿನ್ ನೇತೃತ್ವದ ಸಾಮಾಜಿಕ ಜಾಲತಾಣ ನಿರ್ವಹಣಾ ತಂಡವು ಈ ವಿಡಿಯೋ ಮಾಡಿದ್ದು, ಜೆಸಿಬಿ (ಜೆಡಿಎಸ್. ಕಾಂಗ್ರೆಸ್, ಬಿಜೆಪಿ) ಪಕ್ಷಗಳ ವಿರುದ್ಧ ಹಾಡು ರಚಿಸಿ ಟೀಕಿಸಲಾಗಿದೆ. ವಿಡಿಯೋಗೆ ಉತ್ತಮ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಕೇವಲ ಫೇಸ್ಬುಕ್ನಲ್ಲೇ ನೂರಕ್ಕೂ ಹೆಚ್ಚು ಜನರು ಶೇರ್ ಮಾಡಿದ್ದಾರೆ.
“ಬೊಮ್ಮಾಯಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಇದಕ್ಕೆ ಸಿದ್ದಣ್ಣ ಕುಮಾರಣ್ಣನ ಸಹಕಾರ” ಎಂಬಂತಹ ಪ್ರಾಸಬದ್ಧ ಸಾಲುಗಳು ಹಾಡಿನಲ್ಲಿದೆ. ಜಾತಿ ಧರ್ಮಗಳ ಹೆಸರನಲ್ಲಿ ಜನರನ್ನು ಒಡೆಯಲಾಗುತ್ತಿದ್ದು,
ಇದರಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ ಎಂಬರ್ಥದ ಸಾಲುಗಳಿವೆ. ವಿಡಿಯೋ ನೋಡಿದ ಜನರು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.