Mysore
30
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಎಂಎಲ್‌ಸಿ ಎಚ್.ಎಂ.ರಮೇಶ್‌ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಪಕ್ಷರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಮೇಶ್‌ ಗೌಡರಿಗೆ ನೇಮಕಾತಿಯ ಆದೇಶ ಪತ್ರವನ್ನು ನೀಡಿದರು.

ಜೆಡಿಎಸ್‌ ಪಕ್ಷ ನೇಮಕಾತಿ ಆದೇಶ ಪತ್ರದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧ್ಯಕ್ಷರಾಗಿ ಕಳೆದ ಮೂರು ವರ್ಷಗಳಿಂದ ತಾವೇನು ಕೆಲಸ ಮಾಡಿ ಹಲವಾರು ಹೋರಾಟಗಳನ್ನು ಮಾಡಿದ್ದನ್ನು ನಾನು ಗಮನಿಸಿದ್ದೇವೆ. ಹೀಗಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಜನತಾದಳ ಪಕ್ಷದ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

 

Tags:
error: Content is protected !!