ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಜೆಡಿಎಸ್ ಪಕ್ಷವು, ಬೆಂಗಳೂರು ಎಂಬುದು ಈ ನೆಲಮೂಲದ ಹೆಗ್ಗುರುತು. ಸಮಸ್ತ ಕನ್ನಡಿಗರ ಹೆಮ್ಮೆ ಹಾಗೂ ಕನ್ನಡಿಗರ ಪ್ರತಿಧ್ವನಿ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದ ನಗರ. ಬೆಂಗಳೂರು ಎಂಬುದೇ ಒಂದು ವಿಶ್ವ ಪ್ರಸಿದ್ಧ ಬ್ರ್ಯಾಂಡ್. ಅದೇ ಬೆಂಗಳೂರು ಹೆಸರಿಗೆ ಇರುವ ಶಕ್ತಿ.
ನಮಗೆ ಡಾ.ಮನಮೋಹನ್ ಸಿಂಗ್ ಅವರ ಮೇಲೆ ಅಪಾರವಾದ ಗೌರವವಿದೆ. ಆದರೆ “ಬೆಂಗಳೂರು ನಗರ ವಿವಿ”ಗೆ ಪರ್ಯಾಯವಾಗಿ ಬೇರೆ ಯಾವುದೇ ಹೆಸರಿಡಲು ತೀವ್ರ ವಿರೋಧವಿದೆ. ಈ ವಿಚಾರದಲ್ಲಿ ಕರ್ನಾಟಕದ ಜನತೆಯೂ ಸಹ ಕಾಂಗ್ರೆಸ್ ಸರ್ಕಾರದ ಈ ನಿರ್ಧಾರವನ್ನು ಒಪ್ಪುವುದಿಲ್ಲ.
ರಾಜ್ಯದಲ್ಲಿ ಕನ್ನಡ ಭಾಷೆ, ನೆಲ, ಜಲ ನಾಡಿಗಾಗಿ ಹೋರಾಡಿದ ಸಾವಿರಾರು ಕನ್ನಡಿಗ ಸಾಧಕರು ಇದ್ದಾರೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಕರ್ನಾಟಕಕ್ಕೆ ಕೀರ್ತಿ ತಂದ ಮಹನೀಯರಿದ್ದಾರೆ. ಆ ಕನ್ನಡಿಗರು ಕಾಂಗ್ರೆಸ್ಸಿಗರ ಕಣ್ಣಿಗೆ ಬೀಳಲಿಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಸಿದ್ದರಾಮಯ್ಯನವರೇ ಅಷ್ಟು ಅಭಿಮಾನ, ಗೌರವ ಇದ್ದರೆ ಮೈಸೂರಿನಲ್ಲಿ ನಿರ್ಮಿಸುತ್ತಿರುವ ನಿಮ್ಮ ಹೊಸ ಮನೆಗೆ ಮನಮೋಹನ್ ಸಿಂಗ್ ನಿವಾಸ ಎಂದು ಹೆಸರಿಟ್ಟುಕೊಳ್ಳಿ. ನಿಮ್ಮ ಸೊಸೆಯ ಒಡೆತನದಲ್ಲಿರುವ ಬಹುಕೋಟಿ ಮೌಲ್ಯದ ಐಶಾರಾಮಿ ಕ್ಲಬ್‌ಗೆ ಮರು ನಾಮಕರಣ ಮಾಡಿಕೊಳ್ಳಿ.
ದೆಹಲಿಯ ಹೊಸದಾಗಿ ನಿರ್ಮಿಸಿದ ಕಾಂಗ್ರೆಸ್ ಕಚೇರಿಗೆ “ಇಂದಿರಾ ಭವನ” ಎಂದು ಹೆಸರಿಟ್ಟಿರಿ. ಅದಕ್ಕೆ ಮನಮೋಹನ್ ಸಿಂಗ್ ಹೆಸರಿಡಲು ಇಟಲಿ ಕಾಂಗ್ರೆಸ್‌ನ ಆಪ್ತರ ಗುಂಪು ಒಪ್ಪಲಿಲ್ಲ ಎಂಬುದು ತಮಗೆ ತಿಳಿದಿರುವ ವಿಷಯ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತವಿರುವ ಕಾರಣ “ಗುಲಾಮಿ ಕಾಂಗ್ರೆಸ್” ನಾಯಕರು, ಬೆಂಗಳೂರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತೀರಿ.
ಕೆಲ ತಿಂಗಳ ಹಿಂದಷ್ಟೆ ಬೆಂಗಳೂರಿನಲ್ಲಿ ರಾಜೀವ್ ಗಾಂಧಿ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿತ್ತು. ಈಗ ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು ನಾಮಕರಣ ಮಾಡುವುದಾಗಿ ಘೋಷಿಸಿದ್ದೀರಿ ಎಂದು ಕಿಡಿಕಾರಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…