ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಬಳಿ ಯೋಜನೆಗೆ ಒಪ್ಪಿಸುವ ಕೆಲಸ ಮಾಡಲಿ, ಕನ್ನಡಿಗರ ಹಿತವನ್ನು ಕಾಪಾಡಲಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಹೋರಾಟಗಾರರೂ ಸಹ ಇಂದು ಕರ್ನಾಟಕ ಬಂದ್ ಮಾಡಿದ್ದಾರೆ. ಆದರೆ, ಶಿವಕುಮಾರ್ ಇಂದು ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ ಎಂದು ಟೀಕಿಸಿದೆ.
ನಮ್ಮ ನೀರು, ನಮ ಹಕ್ಕು ಎಂದು ಢೋಂಗಿ ಪಾದಯಾತ್ರೆ ಮಾಡಿ, ಅಧಿಕಾರಕ್ಕೆ ಬಂದರೇ ಮೇಕೆದಾಟು ಯೋಜನೆ ಜಾರಿಮಾಡುತ್ತೇವೆ ಎಂದು, ಜನರಿಗೆ ಚೊಂಬು ಕೊಟ್ಟಿರುವ ಕಾಂಗ್ರೆಸ್ ಎಂದು ಜೆಡಿಎಸ್ ಆರೋಪಿಸಿದೆ.
ರಾಜಕೀಯ ಬದಿಗಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ. ಇಂಡಿ ಕೂಟದ ಮಿತ್ರ ಪಕ್ಷವಾದ ಡಿಎಂಕೆ ಜೊತೆ ಹೊಂದಾಣಿಕೆ ರಾಜಕೀಯ ಬಿಟ್ಟು, ಕರ್ನಾಟಕದ ಹಿತರಕ್ಷಣೆ ಮಾಡಲಿ ಎಂದು ಆಗ್ರಹಿಸಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…