Mysore
23
scattered clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಬಿಜೆಪಿಯ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲವಿಲ್ಲ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ ಎಂದು ಕೆಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ಮಾತನಾಡಿದ ಅವರು, ಕುಟುಂಬಕ್ಕೆ ವಿಷ ಹಾಕಿದವರು ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ ಎಂದು ಪ್ರಶ್ನಿಸಿದ್ದಾರೆ.

ಪಾದಯಾತ್ರೆ ವಿಚಾರದಲ್ಲಿ ಬಿಜೆಪಿ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಏಕಪಕ್ಷೀಯ ತೀರ್ಮಾನವಾಗಿದೆ. ಇದರಿಂದ ನನಗೆ ನೋವಾಗಿದೆ. ಹೀಗಾಗಿ ಪಾದಯಾತ್ರೆಗೆ ನಮ್ಮ(ಜೆಡಿಎಸ್) ಬೆಂಬಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Tags:
error: Content is protected !!