ಬೆಂಗಳೂರು: ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್ ಶೋ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್ ರಿಯಾಲಿಟಿ ಶೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಎಂದು ಆಕ್ರೋಶ ಹೊರಹಾಕಿದೆ.
ಇದನ್ನು ಓದಿ : ಕಳಚಿದ ಚಲಿಸುತ್ತಿದ್ದ ಬಸ್ ಚಕ್ರದ ನೆಟ್ ಬೋಲ್ಟ್: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಏನಿದು ನಟ್ಟು ಬೋಲ್ಟ್ ಹೇಳಿಕೆ?: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಸಿನಿಮಾ ಕಲಾವಿದರು ಭಾಗಿಯಾಗಿರಲಿಲ್ಲ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಇದು ನನ್ನ ವಾರ್ನಿಂಗ್ ಅಂತಾದ್ರೂ ಅಂದುಕೊಳ್ಳಿ. ಕೋರಿಕೆ ಅಂತಾದ್ರೂ ಅಂದುಕೊಳ್ಳಿ, ಚಿತ್ರರಂಗದವರು ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡಬೇಕು ಎಂದು ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.





