ರಾಜ್ಯ

ಕಲಾವಿದರ ಮೇಲೆ ಸೇಡು ತೀರಿಸಿದ ನಟ್ಟು ಬೋಲ್ಟ್‌ ಮಿನಿಸ್ಟರ್:‌ ಜೆಡಿಎಸ್‌ ಕೆಂಡಾಮಂಡಲ

ಬೆಂಗಳೂರು: ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್‌ ರಿಯಾಲಿಟಿ ಶೋ ಬಂದ್‌ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್‌ ಮಿನಿಸ್ಟರ್‌ ಎಂದು ಆಕ್ರೋಶ ಹೊರಹಾಕಿದೆ.

ಇದನ್ನು ಓದಿ : ಕಳಚಿದ ಚಲಿಸುತ್ತಿದ್ದ ಬಸ್‌ ಚಕ್ರದ ನೆಟ್‌ ಬೋಲ್ಟ್‌: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಏನಿದು ನಟ್ಟು ಬೋಲ್ಟ್‌ ಹೇಳಿಕೆ?: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ಸಮಾರಂಭದಲ್ಲಿ ಸಿನಿಮಾ ಕಲಾವಿದರು ಭಾಗಿಯಾಗಿರಲಿಲ್ಲ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇದು ನನ್ನ ವಾರ್ನಿಂಗ್‌ ಅಂತಾದ್ರೂ ಅಂದುಕೊಳ್ಳಿ. ಕೋರಿಕೆ ಅಂತಾದ್ರೂ ಅಂದುಕೊಳ್ಳಿ, ಚಿತ್ರರಂಗದವರು ನಟ್ಟು ಬೋಲ್ಟ್‌ ಹೇಗೆ ಟೈಟ್‌ ಮಾಡಬೇಕು ಎಂದು ಗೊತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

4 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

4 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

4 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

4 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

4 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

4 hours ago