new law atrocities Kannadigas
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯಲಿರುವ ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಈ ಸಮಾವೇಶ ಹೆಚ್ಚಿನ ಮಹತ್ವ ಪಡೆದುಕೊಳ್ಳಲಿದೆ.
ಏ.11 ರಂದು ನಗರದ ಹೊರವಲಯದ ಕೊಮಗಟ್ಟದ ಬಳಿಯ ಮೈದಾನದಲ್ಲಿ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ಹಾಸನ ಹಾಗೂ ವಿಜಯಪುರಗಳಲ್ಲಿ ನಡೆಸಿದ ಸಮಾವೇಶ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ನಿರ್ಧರಿಸಲಾಗಿದೆ.
ಮುಂಬರುವ ಚುನಾವಣೆಗಳಿಗೆ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವುದು, ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮಾರ್ಗದರ್ಶನ ಮಾಡುವುದು, ಪಕ್ಷಸಂಘಟನೆಗಾಗಿ ಸದಸ್ಯತ್ವ ನೋಂದಣಿಯನ್ನು ಇನ್ನಷ್ಟು ಹೆಚ್ಚಿಸಲು ಜನಪರ ಹೋರಾಟಗಳನ್ನು ಹಮಿಕೊಳ್ಳುವ ರೂಪುರೇಷೆ ನಿರ್ಧರಿಸುವುದು, 25 ವರ್ಷಗಳಲ್ಲಿ ಪಕ್ಷ ಬೆಳೆದುಬಂದ ಹೆಜ್ಜೆಗುರುತುಗಳನ್ನು ಅವಲೋಕಿಸುವುದು ಮೊದಲಾದ ವಿಚಾರಗಳು ಸಮಾವೇಶದ ಪ್ರಮುಖ ಅಂಶಗಳಾಗಿವೆ.
ಬೆಂಗಳೂರಿನ ಸಮಾವೇಶದ ಪೂರ್ವ ಸಿದ್ಧತೆಯನ್ನು ಈಗಾಗಲೇ ಪಕ್ಷದ ವತಿಯಿಂದ ಆರಂಭಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್‍ಗೌಡ, ಮಾಜಿ ವಿಧಾನಪರಿಷತ್ ಸದಸ್ಯ ಇ.ಕೃಷ್ಣಪ್ಪ ಮೊದಲಾದ ಮುಖಂಡರ ಅಧ್ಯಕ್ಷತೆಯಲ್ಲಿ ಸಮಾವೇಶದ ಪೂರ್ವ ತಯಾರಿ ಕುರಿತ ಸಭೆ ನಡೆಸಲಾಗಿದೆ.
ಈಗಾಗಲೇ ಪಕ್ಷದ ವತಿಯಿಂದ ನಡೆಸಿರುವ ಎರಡು ಸಮಾವೇಶಕ್ಕಿಂತಲೂ ಉತ್ತಮ ರೀತಿಯಲ್ಲಿ ಈ ಬೆಂಗಳೂರಿನ ಸಮಾವೇಶ ಯಶಸ್ವಿಗೊಳಿಸಲು ಬೇಕಾದ ಸಿದ್ಧತೆ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗಿದೆ.
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…