ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಅಧಿಕಾರಿ ಎಂ.ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರದ ಮುಖಾಂತರ ಸಮರ ಸಾರಿದ್ದಾರೆ.
ಜನಪ್ರಿಯ ಬರ್ನಾರ್ಡ್ ಷಾ ಅವರ ಹೇಳಿಕೆಗಳಲ್ಲಿ ಒಂದಾಗಿರುವ ಹಂದಿಗೆ ಹೋಲಿಕೆಯಾಗುವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಇದೀಗ ಈ ಹೇಳಿಕೆಯನ್ನು ಖಂಡಿಸಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸೇರಿದಂತೆ ಸ್ವತಃ ಕುಮಾರಸ್ವಾಮಿ ಅವರೇ ತಿರುಗೇಟು ನೀಡಿದ್ದಾರೆ.
ಎಂ.ಚಂದ್ರಶೇಖರ್ ಭೂವ್ಯವಹಾರವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ. 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ? ಈ ವಿಚಾರವಾಗಿ ನಿಮ್ಮ ವಿರುದ್ಧ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ. ಅಲ್ಲದೇ ಕೇಂದ್ರ ಸಚಿವರ ಬಗ್ಗೆ ಕೀಳುಮಟ್ಟದ ಪದ ಬಳಸಿರುವುದು ಅಕ್ಷಮ್ಯ. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಬಹುಮಹಡಿ ವಾಣಿಜ್ಯ ಕಟ್ಟಡ ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ. ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಲ್ಲಿ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡ. ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡ. ಕೆರೆ ಒತ್ತುವರಿ ಮಾಡಿಕೊಂಡ ಅಕ್ರಮಗಳ ಬಗ್ಗೆ ತನಿಖೆ ನಡೆಯಬೇಕಲ್ಲವೇ? ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಎಡಿಜಿಪಿ ಚಂದ್ರಶೇಖರ್ ಪತ್ರದ ಮೂಲಕ ಸಮರಸಾರಿರುವ ವಿಚಾರವಾಗಿ ಟ್ವೀಟ್ ಮಾಡಿರುವ ಜೆಡಿಎಸ್, ಚಂದ್ರಶೇಖರ್ ಅವರೇ, ನಿಮ್ಮ ಮೇಲಿರುವ ಆರೋಪಗಳು ಸತ್ಯವಲ್ಲವೆಂದರೆ ನೀವು ಕಾನೂನಿ ಅಡಿಯಲ್ಲಿ ಉತ್ತರ ನೀಡಬಹುದಿತ್ತು. ಆದರೆ ನೀವು ಕಳ್ಳನ ಮನಸ್ಸು ಹುಳ್ಳಳ್ಳಗೆ ಅನ್ನೋ ರೀತಿಯಲ್ಲಿ ಪತ್ರದ ಮೂಲಕ ಉತ್ತರಿಸಿದ್ದೀರಾ?, ನೀವೋಬ್ಬ ಐಪಿಎಸ್ ಅಧಿಕಾರಿ ಎನ್ನುವುದನ್ನು ಮರೆತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕೋಪ, ಹತಾಶೆ ಮತ್ತು ಅಕ್ರೋಶದಿಂದ ಕೀಳುಮಟ್ಟದ ಪದಗಳನ್ನು ಬಳಸಿ ಉತ್ತರ ನೀಡಿದ್ದೀರಿ. ನಿಮ್ಮ ಭ್ರಷ್ಟಾಚಾರವನ್ನು ದಾಖಲೆ ಸಹಿತ ಬಯಲು ಮಾಡಿದ್ದು ಅಪರಾಧವೇ ಎಂದು ಪ್ರಶ್ನೆ ಮಾಡಿದೆ.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಒಬ್ಬರೂ ಭ್ರಷ್ಟ ಅಧಿಕಾರಿ ಈತನ ವಿರುದ್ಧವೂ ಅನೇಕ ದೂರುಗಳು ದಾಖಲಾಗಿದ್ದು, ಆರೋಪ ಪಟ್ಟಿ ಸಹ ಸಲ್ಲಿಕೆಯಾಗಿದೆ. ಅನೇಕ ಅಪರಾಧ ಮಾಡಿರುವ ಕಳಂಕಿತ ಅಧಿಕಾರಿಗಳಿಂದ ನ್ಯಾಯ ಸಮ್ಮತ, ಮುಕ್ತ ಮತ್ತು ಪಾರದರ್ಶಕ ತನಿಖೆ ಅಸಾಧ್ಯ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕೇಂದ್ರ ಸಚಿವರ ವಿರುದ್ಧ ಕೀಳುಮಟ್ಟದ ಪದ ಬಳಸಿರುವ ಹಾಗೂ ಭ್ರಷ್ಟಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನಂತರ ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ತನಿಖೆ ನಡೆಸಬೇಕು ಎಂದು ಜೆಡಿಎಸ್ ಘಟಕ ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…