ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕರ ಹೆಸರು ತುಳುಕು ಹಕುತ್ತಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ನವೀನ್ ಗೌಡ ಎಂಬಾತ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದು, ಜೆಡಿಎಸ್ ಶಾಸಕ. ಎ.ಮಂಜು ಅವರೇ ಪೆನ್‌ಡ್ರೈವ್ ಹಂಚಿಕೆ ಮಾಡಿರಬಹುದು ಎಂದು ಅನುಮಾನಿಸಿದ್ದಾರೆ.
ವಿಡಿಯೋ ವೈರಲ್ ಮಾಡಿದ್ದವರ ಹಿಂದೆ ಮಹನಾಯಕನ ಕೈವಾಡ ಇದೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದರು. ಆ ಮಹಾನಾಯಕ ಮಹಾ ನಾಯಕ ಇವರೇ ಇರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪೋಸ್ಟ್‌ನಲ್ಲೇನಿದೆ?
ಏಪ್ರಿಲ್ ೨೦ ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಅರಕಲಗೂಡು ಶಾಸಕರಾದ ಎ.ಮಂಜು ಅವರಿಗೆ ಏಪ್ರಿಲ್ ೨೧ ರಂದು ಅರಕಲಗೂಡಿಲ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ, ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್ ಹಿಂದೆ ಇರುವ ಮಹಾನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂದು ಪೋಸ್ಟ್ ಮಾಡಿದ್ದಾರೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…