Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್‌ ಕಾರು ಅಪಘಾತ

ರಾಯಚೂರು: ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್‌ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನಲ್ಲಿ ನಡೆದಿದೆ.

ಕರೆಮ್ಮ ನಾಯಕ್‌ ಅವರ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಶಾಸಕಿ ಕರೆಮ್ಮ ನಾಯಕ್‌ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಿಂಗಸಗೂರು ತಾಲ್ಲೂಕಿನ ಗೋಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಾಸಕಿ ಕರೆಮ್ಮ ನಾಯಕ್‌ ಅವರನ್ನು ಲಿಂಗಸಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶಾಸಕಿಯ ಆರೋಗ್ಯ ವಿಚಾರಿಸಲು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿದ್ದಾರೆ.

Tags:
error: Content is protected !!