ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನಲ್ಲಿ ನಡೆದಿದೆ.
ಕರೆಮ್ಮ ನಾಯಕ್ ಅವರ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಲಿಂಗಸಗೂರು ತಾಲ್ಲೂಕಿನ ಗೋಲಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಸಕಿ ಕರೆಮ್ಮ ನಾಯಕ್ ಅವರನ್ನು ಲಿಂಗಸಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶಾಸಕಿಯ ಆರೋಗ್ಯ ವಿಚಾರಿಸಲು ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…