ರಾಜ್ಯ

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.

ವಿಜಯಪುರ ನಗರದಲ್ಲಿ ಜನತಾ ಸಮಾವೇಶ, ಕಿತ್ತೂರು ಕರ್ನಾಟಕ ಹಾಗೂ ಜೆಡಿಎಸ್ ಬೆಳ್ಳಿಹಬ್ಬದ ಸಂಭ್ರಮದ ಹೆಸರಿನಲ್ಲಿ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಕಿತ್ತೂರು ಕರ್ನಾಟಕ ಭಾಗದ 7 ಜಿಲ್ಲೆಗಳ ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಹಾಸನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಯಿತು. ಹಾಸನದಲ್ಲಿ ನಡೆಸಿದ ಬೆಳ್ಳಿಹಬ್ಬದ ಆಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ವಿಜಯಪುರದಲ್ಲೂ ರಜತಮಹೋತ್ಸವವನ್ನು ನಾಳೆ ನಡೆಸಲಾಗುತ್ತದೆ.

ಇದಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಪಕ್ಷದ ಎಲ್ಲಾ ಮುಖಂಡರಿಗೂ ಸಮಾವೇಶಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದೆ. ಈ ಭಾಗದಲ್ಲಿ ಜೆಡಿಎಸ್ ನೆಲೆ ಭದ್ರವಾಗಿದೆ ಎಂಬುದನ್ನು ರಾಜಕೀಯ ಎದುರಾಳಿಗಳಿಗೆ ತೋರಿಸುವುದು ಸಮಾವೇಶದ ಪ್ರಮುಖ ಉದ್ದೇಶ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ನಾಡಿಗೆ ಮಾಡಿರುವ ಸಾಧನೆಗಳು ಹಾಗೂ ಈ ಭಾಗಕ್ಕೆ ನೀಡಿದ ಕೊಡುಗೆಗಳನ್ನೊಳಗೊಂಡ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

30 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago