ಬೆಂಗಳೂರು: ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿದೇಶದಲ್ಲಿ ಪ್ರಜ್ವಲ್ ತಲೆ ಮರೆಸಿಕೊಂಡಿರುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹಲವಾರು ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದೆ.
ಸಿಎಂ ಸಿದ್ದರಾಮಯ್ಯ ಅವರು ಕೂಡಾ ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಎರಡು ಬಾರಿ ಪತ್ರವನ್ನು ಬರೆದಿದ್ದಾರೆ. ಇತ್ತ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ವಾಪಸಾತಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕೂಡಾ ಮನವಿ ಮಾಡಿದ್ದರು.
ಇದರ ಬೆನ್ನಲ್ಲೇ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಪ್ರಜ್ವಲ್ ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿರುವ ದೇವೇಗೌಡರು. ನಿನ್ನಿಂದ ಕುಟುಂಬ ಮಾನ ಹಾಳಾಗುತ್ತಿದೆ. ನೀನು ಎಲ್ಲೇ ಇದ್ದರೂ ಹಿಂತಿರುಗಿ ಬಂದು ಕಾನೂನು ಪ್ರಕ್ರಿಯೆ ಒಳಪಡು ಎಂದು ಎಚ್ಚರಿಕೆ ನೀಡುತ್ತಿದ್ದೇನೆ. ಇನ್ನು ನನ್ನ ತಾಳ್ಮೆಯನ್ನು ಪರೀಕ್ಷಿಸಬಾರದು ಎಂದು ಬರೆದುಕೊಂಡಿದ್ದಾರೆ.
ಇದೊಂದು ರಾಜಕೀಯ ಪಿತೂರಿಯಾಗಿದ್ದು, ಇದನ್ನು ಸಮರ್ಥವಾಗಿ ಎದುರಿಸಬೇಕಿದೆ. ಇದಕ್ಕಾಗಿ ಯಾವುದೇ ಮುಲಾಜಿಲ್ಲದೇ ಪ್ರಜ್ವಲ್ ಬಂದು ಪೊಲೀಸರಿಗೆ ಶರಣಾಗಿ, ವಿಚಾರಣೆ ಎದುರಿಸಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ, ನನ್ನ, ಕುಟುಂಬದ ಕೋಪವನ್ನು ಎದುರಿಸಬೇಕಾಗುತ್ತದೆ. ಅವನು ಎಸಗಿದ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ನ್ಯಾಯಾಲಯವಿದೆ.
ನಾನಾಗಲಿ, ನಮ್ಮ ಕುಟುಂಬವಾಗಲಿ ಈ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ಪ್ರಕಣದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಿ, ಮರಳಿ ಜನರ ವಿಶ್ವಾಸವನ್ನು ಹಿಂಪಡೆಯುವುದೇ ನನ್ನ ಉದ್ದೇಶವಾಗಿದೆ ಎಂದು ನೋಟಿಸ್ ನೀಡಿದ್ದಾರೆ.
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…