ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಡಿಸಿಎಂ ಡಿಕೆಶಿ ಕಾರಣ: ಜೆಡಿಎಸ್‌ ಆರೋಪ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೊರಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು ನಿಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಧಿಕ್ಕಾರ. ಕ್ರೀಡಾಂಗಣದಲ್ಲಿಯೇ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್‌ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ, ಆರ್‌ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್‌ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್‌ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್‌ ಸರ್ಕಾರ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ.

ಆಂದೋಲನ ಡೆಸ್ಕ್

Recent Posts

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

6 mins ago

ರಂಜಾನ್, ಯುಗಾದಿ ; ಎಸ್ಪಿ ಕಚೇರಿಯಲ್ಲಿ ಸೌಹಾರ್ದ ಸಭೆ

ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…

15 mins ago

2027ರ ಗಣತಿಗೆ ಡಿಜಿಟಲ್‌ ಸ್ಪರ್ಶ : ದೋಷರಹಿತವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚನೆ

ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…

22 mins ago

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

1 hour ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

3 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

3 hours ago