chinaswamy
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೊರಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು ನಿಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಧಿಕ್ಕಾರ. ಕ್ರೀಡಾಂಗಣದಲ್ಲಿಯೇ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ, ಆರ್‌ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಂಡಿರುವುದು ಘೋರ ದುರಂತ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…