ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ.
ಅಲ್ಪಸಂಖ್ಯಾತರ ಇಲಾಖೆಯಲ್ಲಿ ಸುಮಾರು 625 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಜಮೀರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಅವರ ಇಲಾಖೆಯಲ್ಲಿ ಕೇಳಿ ಬಂದಿರುವ ಆರೋಪಗಳ ಬಗ್ಗೆ ವಿಚಾರಣೆಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರಿಗೆ ಸಲ್ಲಿಸಲಿರುವ ದೂರಿನಲ್ಲಿ ಕೋರುವ ಸಾಧ್ಯತೆಗಳಿವೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಎಲ್ಲೆಡೆ ತಾಂಡವವಾಡುತ್ತಿದ್ದು, ಹಗರಣಗಳಿಂದಲೇ ಸದ್ದುಮಾಡುತ್ತಿದೆ ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.





