ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ವಿಜಯಪುರದಲ್ಲಿ ಫೆ.27ರಂದು ಪಕ್ಷದ ಬೆಳ್ಳಿ ಹಬ್ಬದ ಆಚರಣೆ ಮಾಡಲು ಜೆಡಿಎಸ್ ಸಿದ್ಧತೆ ನಡೆಸಿದೆ. ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 8ರಂದು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ಸೇರಿದ್ದ ಪಕ್ಷದ ಮುಖಂಡರು ಹಾಸನದಲ್ಲಿ ನಡೆಸಿದ ಮಾದರಿಯಲ್ಲಿ ಮತ್ತೆರಡು ಸಮಾವೇಶಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇತ್ತೀಚೆಗೆ ಹಾಸನದಲ್ಲಿ ಬೆಳ್ಳಿಹಬ್ಬ ಆಚರಿಸಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಲಾಗಿತ್ತು.
ಹಾಸನ ಸಮಾವೇಶದ ಯಶಸ್ಸಿನ ಹಿನ್ನೆಲೆಯಲ್ಲಿ ಮತ್ತೆರಡು ಸಮಾವೇಶ ನಡೆಸುವ ಮೂಲಕ ಜೆಡಿಎಸ್ ಸುಭದ್ರವಾಗಿದೆ ಎಂಬ ಸಂದೇಶ ನೀಡುವ ಉದ್ದೇಶವನ್ನು ಹೊಂದಲಾಗಿದೆ. ಆ ಮೂಲಕ ಪಕ್ಷದ ಸಂಘಟನೆಗೆ ಒತ್ತು ನೀಡುವುದು ಹಾಗೂ ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಗೆ ಕಾರ್ಯಕರ್ತರು ಮತ್ತು ಮುಖಂಡರನ್ನು ಸಜ್ಜುಗೊಳಿಸುವ ಗುರಿ ಪಕ್ಷಕ್ಕೆ ಇದೆ.
ಪಕ್ಷದ ರಾಷ್ಟ್ರಿ?ಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿರ್ದೇಶನದಂತೆ ಹಾಸನದಲ್ಲಿ ಯಶಸ್ವಿಯಾಗಿ ಬೆಳ್ಳಿಹಬ್ಬ ಆಚರಿಸಲಾಗಿದೆ. ಅದೇ ರೀತಿ ವಿಜಯಪುರ ಹಾಗೂ ಬೆಂಗಳೂರಿನಲ್ಲಿ ಮತ್ತೆ ರಜತ ಮಹೋತ್ಸವಗಳನ್ನು ಆಚರಿಸಲು ತೀರ್ಮಾನಿಸಲಾಗಿದೆ.
ಮಾ.8 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಕಾರ್ಯಕರ್ತರನ್ನು ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆಗೆ ಸಜ್ಜುಗೊಳಿಸುವ ಉದ್ದೇಶ ಹೊಂದಲಾಗಿದೆ.
ಜಿಬಿಎ ವ್ಯಾಪ್ತಿಯ ನಗರ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವ ಇಚ್ಛೆ ಇದ್ದರೂ ಇನ್ನೂ ಯಾವುದೇ ಚರ್ಚೆಯಾಗಿ ಅಧಿಕೃತ ತೀರ್ಮಾನ ಮಾಡಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…