ರಾಜ್ಯ

ರಾಜ್ಯ ಬಜೆಟ್‌ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ: ಜೆಡಿಎಸ್‌ ಟ್ವೀಟ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವ ಬಜೆಟ್‌ನಲ್ಲಿ ಅನುದಾನ ಹಂಚಿಕೆ, ಯೋಜನೆ ಘೋಷಣೆ ವಿಚಾರದಲ್ಲಿ ಉತ್ತರ ಕರ್ನಾಟಕದ ಜನತೆಗೆ ಮಹಾದ್ರೋಹವಾಗಿದೆ. ಕಲ್ಯಾಣ ಕರ್ನಾಟಕದ ಮಂದಿಗೆ ಅನ್ಯಾಯ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷರೇ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಬಹಿರಂಗ ವೇದಿಕೆಯಲ್ಲೇ‌ ಮಂಗಳಾರತಿ ಎತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನಿಮ್ಮದು ತುಷ್ಟೀಕರಣದ ಬಜೆಟ್. ಕೆಲವರಿಗಾಗಿ ಬಹುಜನರ ಹಿತವನ್ನು ಮರೆತಿದ್ದೀರಿ ಎಂಬುದು ಸತ್ಯ. ಅದಕ್ಕೆ ಖರ್ಗೆಯವರ ಮಾತಿನ ಛಡಿ ಏಟುಗಳೇ ಸಾಕ್ಷಿಯಾಗಿದೆ ಎಂದು ತಿರುಗೇಟು ನೀಡಿದೆ.

ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ?

ಕನ್ನಡಕ್ಕೆ ಪ್ರಥಮ ಆದ್ಯತೆ , ಕನ್ನಡವೇ ಆಡಳಿತ ಭಾಷೆ ಎಂದು ಪುಂಗಿ ಬಿಡುತ್ತಲೇ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ 100 ಉರ್ದು ಶಾಲೆಗಳನ್ನು ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಹೈಟೆಕ್‌ ಮಾಡುತ್ತಿದ್ದಾರೆ.

ಕನ್ನಡವೇ ಗೊತ್ತಿಲ್ಲದ, ಕನ್ನಡ ಓದಲು, ಬರೆಯಲು ಬಾರದ, ಕೇವಲ ಉರ್ದು ಭಾಷೆಯಲ್ಲಿ ಶಿಕ್ಷಣ ಪಡೆದರೇ ಕನ್ನಡದಲ್ಲಿ ಆಡಳಿತ ನಡೆಸಲು ಸಾಧ್ಯವಾಗುತ್ತದೆಯೇ? ಇದರಿಂದ ಕನ್ನಡ ಭಾಷೆ ಉಳಿಯುತ್ತದೆಯೇ ? ಮತಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಅತಿಯಾಗಿ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯ ಉರ್ದುರಾಮಯ್ಯ, ಆಗಿ ಬದಲಾಗಿ ಕನ್ನಡಭಾಷೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.

ರಾಜ್ಯದಲ್ಲಿ ಈಗಾಗಲೇ ಸಾವಿರಾರು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಾವಿರಾರು ಸರ್ಕಾರಿ ಶಾಲೆಗಳನ್ನು ದುರಸ್ತಿಮಾಡಲು ಸರ್ಕಾರದ ಬಳಿ ದುಡ್ಡಿಲ್ಲದೇ, ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಬಜೆಟ್‌ ನಲ್ಲಿ 100 ಹೈಟೆಕ್ ಉರ್ದು ಶಾಲೆಯ ಘೋಷಣೆ ಕನ್ನಡಕ್ಕೆ ಹಾಗೂ ಕನ್ನಡ ಭಾಷಿಕರ ಮೇಲೆ ಮಾಡುತ್ತಿರುವ ಗಧಾ ಪ್ರಹಾರ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕಿಡಿಕಾರಿದೆ.

ಅರ್ಚನ ಎಸ್‌ ಎಸ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

7 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

8 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

8 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

12 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

13 hours ago