ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್ ಪಕ್ಷ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, CM 30% + DCM 30% = 60% ಕಾಂಗ್ರೆಸ್ ಸರ್ಕಾರ. ಸರ್ಕಾರಿ ಇಲಾಖೆಗಳಲ್ಲಿ 60% ಕಮಿಷನ್‌ಗೆ “ಕೈ” ಜೋಡಿಸಿದ ಕಾಂಗ್ರೆಸ್” ಸರ್ಕಾರ ಎಂದು ಆರೋಪಿಸಿದೆ.
ಕರ್ನಾಟಕದಲ್ಲಿ ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪರ್ಸಂಟೇಜ್ ವ್ಯವಹಾರದ ಮೇಲೆ ಕೆಲಸ ಕಾರ್ಯಗಳು ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ “ಲಂಚವೇ ಇಂಧನ”ವಾಗಿ ಬಿಟ್ಟಿದೆ. ಭ್ರಷ್ಟ ಮುಖ್ಯಮಂತ್ರಿ, ಭ್ರಷ್ಟ ಸಚಿವರುಗಳು ವಿಧಾನಸೌಧದಲ್ಲೇ “ಲಂಚದ ಕೊಠಡಿ ತೆರೆದಿದ್ದು, ಅಲ್ಲಿಂದಲೇ 60% ಕಮಿಷನ್ ವಸೂಲಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯದಲ್ಲಿ ದುಷ್ಟ ಕಾಂಗ್ರೆಸ್ ಸರ್ಕಾರದಿಂದ ಅರಾಜಕತೆ ತಾಂಡವವಾಡುತ್ತಿದ್ದು, ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರದ ಕೂಪಗಳಾಗಿದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಮಾರಣ ಹೋಮ ನಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರ್ಕಾರ ಮಾತ್ರ ಕುಂಭಕರ್ಣ ನಿದ್ದೆಯಲ್ಲೇ ಕಾಲಹರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…