ರಾಜ್ಯ

ಡಿಸಿಎಂ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯ ಪೆನ್ನು ಪೇಪರ್ ಹಿಡಿದು ಭಿಕ್ಷೆ ಬೇಡಿದ್ದರು: ಜೆಡಿಎಸ್‌ ಕಿಡಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ನಿಮ್ಮ ಸರ್ಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಒಕ್ಕಲಿಗ ಸಮುದಾಯ ಮತ್ತು ಚಂದ್ರಶೇಖರನಾಥ ಸ್ವಾಮೀಜಿ ಅವರ ಮೇಲೆ ಯಾಕೆ ಕೆಸರೆರೆಚುತ್ತಿದ್ದೀರಿ? ಸ್ವಾಮೀಜಿ ಅವರ ಮೇಲೆ ನೀವು ಎಫ್ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದೆ.

ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸ್‌ ಕಲಾಗಿತ್ತು ಎಂದು ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು, ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದೆ.

ಚಂದ್ರಶೇಖರ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್‌ ಸರ್ಕಾರವೇ ತೊಡೆತಟ್ಟಿ ನಿಂತಿದ್ದು, ಸಚಿವರುಗಳೆಲ್ಲಾ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಅವರ ಹೇಳಿಕೆಯ ಬಗ್ಗೆ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು. ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ ಎಂದು ಹೇಳಿದೆ.

ಅರ್ಚನ ಎಸ್‌ ಎಸ್

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago