ಬೆಂಗಳೂರು: ಮುಡಾ ಅಕ್ರಮಗಳ ಸುಳ್ಳುಗಳ ಸರದಾರ ʼಸಿದ್ದʼ ರೂವಾರಿ ಭ್ರಷ್ಟಾರಾಮಯ್ಯನ ಕಪ್ಪು ಚುಕ್ಕೆಗಳು ನೂರಾರಿವೆ ಎಂದು ಜೆಡಿಎಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ನಾನು ಎಂದು ಮೆರೆಯುತ್ತಿರುವ ಮುಡಾರಾಮಯ್ಯ ಪ್ರಭಾವಬೀರಿಯೇ ಪತ್ನಿಗೆ 14 ಸೈಟು ಮಂಜೂರು ಮಾಡಿಸಿದ್ದಾರೆ. ಅಲ್ಲದೇ ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ 14 ಸೈಟುಗಳ ಹಂಚಿಕೆಯಲ್ಲಿ ಅಕ್ರಮಗಳ ಸರಮಾಲೆಯೇ ನಡೆದಿದೆ. ಜೊತೆಗೆ ಸುಮಾರು 700 ಕೋಟಿ ರೂಪಾಯಿಯ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಬಹುಕೋಟಿ ಮುಡಾ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಹಲವು ಸ್ಫೋಟಕ ಮಾಹಿತಿಯನ್ನು ಹೆಕ್ಕಿ ಹೊರ ತೆಗೆದಿದೆ. ಇ.ಡಿ ತನಿಖೆ ಮತ್ತು ಕಾನೂನಿನ ಸುರುಳಿ ಬಿಗಿಯಾಗುತ್ತಿದ್ದಂತೆ ಭ್ರಷ್ಟರಾಮಯ್ಯ ಜನರ ಅನುಕಂಪ ಗಿಟ್ಟಿಸಿಕೊಳ್ಳಲು ಸಮಾವೇಶದ ನೆಪದಲ್ಲಿ ನಾಟಕ ಮಾಡಲು ಹೊರಟಿದ್ದಾರೆ. ಹೀಗಾಗಿ ಭ್ರಷ್ಟಾಚಾರದ ಪಿತಾಮಹರಾಗಿರುವ ಸಿದ್ದರಾಮಯ್ಯರವರ ತೆರೆಯದ ಪುಸ್ತಕದಲ್ಲಿ ಮತ್ತೆಷ್ಟು ಉಳುಕುಗಳಿವೆಯೋ ? ಎಂದು ವ್ಯಂಗ್ಯವಾಡಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…