ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.
ಈ ಆಡಿಯೋದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ವಿರುದ್ಧವಾಗಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜೆಡಿಎಸ್ ನಾಳೆ(ಮೇ.೨೦) ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮಾಜಿ ಶಾಸಕ ಎಚ್.ಎಂ ರಮೇಶ್ ಗೌಡ, ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಮಾಜಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕುಮ್ಮಕ್ಕಿನಿಂದ ಎಲ್.ಅರ್ ಶಿವರಾಮೇಗೌಡ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಇದನ್ನು ಖಂಡಿಸಿ ಡಿಕೆಶಿ ಹಾಗೂ ಶಿವರಾಮೇಗೌಡ ವಿರುದ್ಧ ಬೆಂಗಳೂರು ಮಹಾನಗರ ಜನತಾದಳ ವತಿಯಿಂದ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…