ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಜೆಡಿಎಸ್ ಒತ್ತಾಯಕ್ಕೆ ಮಣಿದಿದ್ದು, ಮಂಡ್ಯ, ಹಾಸನ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಮೂರು ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ಇತ್ತೀಚೆಗೆ ಮೈತ್ರಿ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಹಲವಾರು ಬಿನ್ನಾಭಿಪ್ರಾಯ ಏರ್ಪಟ್ಟಿತ್ತು. ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಬಿಜೆಪಿ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಮತ್ತು ಜೆಡಿಎಸ್ ನಿಂದ ಮಂಡ್ಯ ಕಣದಲ್ಲಿ ಅಭ್ಯರ್ಥಿ ನಿಲ್ಲಿಸುವುದಾಗಿ ಈ ಹಿಂದೆ ಜೆಡಿಎಸ್ ಹೇಳಿತ್ತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಮಾಡುವ ಸಮಾವೇಶಕ್ಕೆ ಆಯಾ ಪ್ರದೇಶದ ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಟಿಕೆಟ್ ಹಂಚಿಕೆ ವೇಳೆಯೂ ಜೆಡಿಎಸ್ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ಜೆಡಿಎಸ್ ನಾಯಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಎಲ್ಲಾ ಮನಸ್ತಾಪಗಳಿಗೂ ಈಗ ತೆರೆಬಿದ್ದಿದೆ.
ಈ ನಡುವೆ ಸುಮಲತಾ ಟಿಕೆಟ್ ನೀಡುವ ಕುರಿತು ಮಾತನಾಡಿದ ರಾಧಾ ಮೋಹನ್ ದಾಸ್, ಸುಮಲತಾ ಅವರ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ಹೇಳಿದ್ದಾರೆ. ಜೆಡಿಎಸ್‌ಗೆ ಮಂಡ್ಯ ಟಿಕೆಟ್ ಸಿಕ್ಕರೇ ಸುಮಲತಾ ನಡೆಯೇನು ಎಂಬುದು ಸದ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…