ಮೈಸೂರು: ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್(ಐಪಿಪಿಬಿ) 2024ನೇ ಸಾಲಿನಲ್ಲಿ ಮತ್ತೊಂದು ನೇಮಕಾತಿ ಪ್ರಕಟಿಸಿದೆ. ದೇಶದ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್(ಕಾರ್ಯನಿರ್ವಹಕ) ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಕರೆದಿದೆ.
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್ಸ್ ಲಿಮಿಟೆಡ್ (ಐಪಿಪಿಬಿ) ಗ್ರಾಮೀಣ ಡಾಕ್ ಸೇವಕ್ ನಲ್ಲಿ, 344 ಕಾರ್ಯನಿರ್ವಾಹಕ ಹುದ್ದೆಗಳು ಖಾಲಿಯಿದ್ದು, ಈ ಲಿಂಕ್ ಬಳಸಿ https://www.ippbonline.com/ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ಹುದ್ದೆಗಳು : ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು : 344
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 11 ರಿಂದ 31, 2024
ವೇತನ : ತಿಂಗಳಿಗೆ 30,000 ರೂ.
ಅರ್ಜಿ ಶುಲ್ಕ : 750 ರೂ.
ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು
ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ / ಮಂಡಳಿಯಿಂದ ಯಾವುದೇ ವಿಷಯದಲ್ಲಿ (ನಿಯಮಿತ / ದೂರಶಿಕ್ಷಣ) ಪದವಿ ಪಡೆದಿರಬೇಕು. (ಅಥವಾ) ಸರ್ಕಾರಿ ನಿಯಂತ್ರಣ ಸಂಸ್ಥೆಯಿಂದ ಅನುಮೋದಿಸಲ್ಪಟ್ಟಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕಾಲ ಗ್ರಾಮೀಣ ಡಾಕ್ ಸೇವಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…
ಮೈಸೂರು : ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ…
• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…
ಹೊಸದಿಲ್ಲಿ : ಇರಾನ್-ಇಸ್ರೇಲ್,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್,ಪೆಟ್ರೋಲ್ ಮತ್ತು ಅಡುಗೆ ಅನಿಲ…
ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…