Intelligence Department
ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳು ಸೇರಿ 10 ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಪಿಜಿ, ಎಂಬಿಎ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವವರು ಅಕ್ಟೋಬರ್ 28 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 1.35 ಲಕ್ಷ ರೂ. ವರೆಗೆ ಸಂಬಳವಿರುವ ಈ ಹುದ್ದೆಗಳಿಗೆ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ ಎಂದು ಎಸ್‌ಬಿಐ ಪ್ರಕಟಣೆ ತಿಳಿಸಿದೆ.
ಹುದ್ದೆಗಳ ವಿವರ:
ಮ್ಯಾನೇಜರ್ ಹುದ್ದೆಗಳ ಸಂಖ್ಯೆ: 6
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಸಂಖ್ಯೆ: 3
ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳ ಸಂಖ್ಯೆ: 1
ಇದನ್ನೂ ಓದಿ:-JOB ALERTS | ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ನೇಮಕಾತಿ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಪಿಜಿ, ಎಂಬಿಎ, ಪಿಜಿಡಿಬಿಎಂ ಉತ್ತೀರ್ಣರಾಗಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ಸಂಬಂಧಿತ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯೋಮಿತಿ ಆಗಸ್ಟ್ 8, 2025 ರಂತೆ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ 30 ವರ್ಷಗಳು, ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 35 ರಿಂದ 45 ವರ್ಷಗಳು ಮತ್ತು ಮ್ಯಾನೇಜರ್ ಹುದ್ದೆಗಳಿಗೆ 24 ರಿಂದ 36 ವರ್ಷಗಳು ಆಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ತಲಾ ರೂ.750 ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಸಂಬಳ ಎಷ್ಟು?
ಅಂತಿಮ ಆಯ್ಕೆಯು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಸಂದರ್ಶನವನ್ನು ಆಧರಿಸಿರುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ ರೂ.64,820 ರಿಂದ ರೂ.1,35,020 ವರೆಗಿನ ವೇತನವನ್ನು ನೀಡಲಾಗುತ್ತದೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…