ರಾಜ್ಯ

ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ ; ಪ್ರತೀ ಜಿಲ್ಲೆಯಲ್ಲಿಯೂ ಉದ್ಯೋಗ ಮೇಳ : ಸಿ.ಎಂ

ಮೈಸೂರು : ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.

ಇದನ್ನು ಓದಿ: ನಾಳೆ ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

3 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

3 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

4 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

4 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

4 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

4 hours ago