Mysore
27
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಮೇ.1ರಿಂದ ಜೋಗ ಜಲಪಾತ ವೀಕ್ಷಣೆಗೆ ಮುಕ್ತ

ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಏಪ್ರಿಲ್.‌30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

ಈಗ ಕಾಮಗಾರಿ ಸಂಪೂರ್ಣವಾಗಿ ಮುಗಿದಿರುವ ಹಿನ್ನೆಲೆಯಲ್ಲಿ ಮೇ.1ರಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!