Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಕಾಂಗ್ರೆಸ್‌ ಸೇರ್ಪಡೆಯ ನಂತರ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್‌ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ ಕಾಂಗ್ರೆಸ್‌ ಸೇರಿದ್ದೇನೆ. ಮೈತ್ರಿ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿದೆ. ಈ ಕಾರಣಕ್ಕಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಅದರ ಹೊರತಾಗಿ ಏನೂ ಇಲ್ಲ. ಕಳೆದ ಎರಡೂ ಮೂರು ತಿಂಗಳಿನಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ತೀವ್ರ ಅಸಮಾಧಾನ ಮೂಡಿಸಿವೆ. ನಾವು ಕಟ್ಟಿದ ಮನೆಯಲ್ಲಿ ನಮಗೆ ವಾಸ ಮಾಡಲು ಆಗುವುದಿಲ್ಲ. ಈ ಹಿಂದೆ ನಾನು ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದೆ. ಈಗ ಮತ್ತೆ ಡಿಕೆಶಿ ಅವರ ನೇತೃತ್ವದಲ್ಲೇ ಕಾಂಗ್ರೆಸ್‌ಗೆ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷದ ಎಲ್ಲರೊಂದಿಗೆ ಒಟ್ಟುಗೂಡಿ ಶ್ರಮ ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Tags: