ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಮಾತನಾಡಿದ ಅವರು, ನಾನು ಮೊದಲು ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದೆ. ಈಗ ಮತ್ತೆ ಕಾಂಗ್ರೆಸ್ ಸೇರಿದ್ದೇನೆ. ಮೈತ್ರಿ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿದೆ. ಈ ಕಾರಣಕ್ಕಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಅದರ ಹೊರತಾಗಿ ಏನೂ ಇಲ್ಲ. ಕಳೆದ ಎರಡೂ ಮೂರು ತಿಂಗಳಿನಿಂದ ನಡೆದ ರಾಜಕೀಯ ಬೆಳವಣಿಗೆಗಳು ನನಗೆ ತೀವ್ರ ಅಸಮಾಧಾನ ಮೂಡಿಸಿವೆ. ನಾವು ಕಟ್ಟಿದ ಮನೆಯಲ್ಲಿ ನಮಗೆ ವಾಸ ಮಾಡಲು ಆಗುವುದಿಲ್ಲ. ಈ ಹಿಂದೆ ನಾನು ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಪ್ರಾರಂಭಿಸಿದ್ದೆ. ಈಗ ಮತ್ತೆ ಡಿಕೆಶಿ ಅವರ ನೇತೃತ್ವದಲ್ಲೇ ಕಾಂಗ್ರೆಸ್‌ಗೆ ಸೇರಿದ್ದೇನೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷದ ಎಲ್ಲರೊಂದಿಗೆ ಒಟ್ಟುಗೂಡಿ ಶ್ರಮ ವಹಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…