ರಾಜ್ಯ

ಪತ್ರಿಕೋದ್ಯಮ ಪ್ರಭಾವಶಾಲಿ ಉದ್ಯಮ : ಸಂಸದ ಬೊಮ್ಮಾಯಿ

ಬೆಂಗಳೂರು : ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಶೇಷಾದ್ರಿಪುರಂ ಕಾಲೇಜಿನಲ್ಲಿ ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ನನ್ನ ಆತ್ಮೀಯ ಸ್ನೇಹಿತನಿಗೆ ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು ಖಾದ್ರಿ ಶಾಮಣ್ಣ ಅವರನ್ನು 1978 ರಲ್ಲಿ ನೋಡಿದಾಗ ತುರ್ತುಪರಿಸ್ಥಿತಿ ಮುಗಿದಿತ್ತು. ಇಡಿ ವಿಶ್ವದಲ್ಲಿ ವೈಎನ್ ಕೆ ಅವರ ಹೆಸರಿತ್ತು. ಕರ್ನಾಟಕದಲ್ಲಿ ಎಮರ್ಜೆನ್ಸಿ ವಿರುದ್ದ ಸಿಡಿದೆದ್ದ ವ್ಯಕ್ತಿ ಖಾದ್ರಿ ಶಾಮಣ್ಣ ಅವರು, ಪತ್ರಿಕೋದ್ಯಮ ಬಹಳ ಪ್ರಭಾವಶಾಲಿ ಉದ್ಯಮ, ಪ್ರಜಾಪ್ರಭುತ್ವದಲ್ಲಿ ಜಾಗೃತವಾಗಿ ಇರುವುದು ಎಷ್ಟು ಮುಖ್ಯವೋ ಜನ ಸಮುದಾಯದ ಪರ ಇರುವ ಕೆಲಸ ಮಾಡುವುದು ಅಷ್ಟೇ ಮುಖ್ಯ. ಅದನ್ನು ಪತ್ರಿಕೋದ್ಯಮ ಮಾಡುತ್ತದೆ ಎನ್ನುವ ವಿಶ್ವಾಸ ಎಂದು ಹೇಳಿದರು.

ಖಾದ್ರಿ ಶಾಮಣ್ಣ ಅವರು ಬಹಳ ಪ್ರಭಾವಶಾಲಿ ಆಗಿದ್ದರು. ಅವರು ಬದುಕಿಗ ಮುಂದೆ ಬರುವ ಸರ್ಕಾರಗಳು ಅವರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಪತ್ರಿಕೋದ್ಯಮ ಬಹಳ ಕ್ಲಿಷ್ಟವಾಗಿರುತ್ತದೆ ಕೆಲವು ಸಾರಿ ಪರ ಮತ್ತು ವಿರೋಧ ಅಭಿಪ್ರಾಯಗಳು ಬಂದಾಗ ಸತ್ಯದ ಮೇಲೆ ನಿಲುವು ತೆಗೆದುಕೊಂಡಾಗ ಅದಕ್ಕೆ ಮಹತ್ವ ಬರುತ್ತದೆ. ಕೆಲವು ಸಾರಿ ತಾವು ತೆಗೆದುಕೊಂಡ ನಿಲುವಿನ ವಿರುದ್ಧ ತೀರ್ಮಾನ ತೆಗೆದುಕೊಳ್ಳುವ ಸಂದರ್ಭ ಬರಬಹುದು. ಆಗ ಸ್ಪಷ್ಟವಾಗಿ ನಿಲುವು ತೆಗೆದುಕೊಳ್ಳಬೇಕು. ಖಾದ್ರಿ ಶಾಮಣ್ಣ ಅಂತಹ ಸ್ಪಷ್ಟ ನಿಲುವು ತೆಗೆದುಕೊಳ್ಳುತ್ತಿದ್ದರು. ಅಂತಹವರ ಗರಡಿಯಲ್ಲಿ ಕೂಡ್ಲಿ ಗುರುರಾಜ್ ಬೆಳೆದಿದ್ದಾರೆ. ಹುಬ್ಬಳ್ಳಿಯಲ್ಲಿ ಕನ್ನಡ ಪ್ರಭದಲ್ಲಿ ಇವರು ಇದ್ದಾಗ ಅವರ ಲೇಖನಗಳನ್ನು ಓದಿದೆ. 1998 ರಲ್ಲಿ ನಾನು ಸ್ಥಳೀಯ ಸಂಸ್ಥೆಯಿಂದ ಚುನಾವಣೆ ನಿಂತಿದೆ, ನಮ್ಮ ಪಕ್ಷದಲ್ಲಿ ಬಂಡಾಯ ಅಭ್ಯರ್ಥಿ ನಿಂತಿದ್ದರು. ಆಗ ಎಲ್ಲ ಪತ್ರಿಕೆಯವರು 24 ದಿನ ನನ್ನ ವಿರುದ್ಧ ಬರೆದಿದ್ದರು. ಒಬ್ಬರು ಪತ್ರಕರ್ತೆ ಸನ್ ಆಸ್ ಸೆಟ್ ಅಂತ ಬರೆದಿದ್ದರು. ಆದರೆ, ನಾನು ಅತಿ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದೆ ಎಂದು ನೆನಪಿಸಿಕೊಂಡರು.

ಪತ್ರಕರ್ತರು ಮತ್ತು ರಾಜಕಾರಣಿಗಳ ನಡುವೆ ಅವಿನಾಭಾವ ಸಂಬಂಧ. ರಾಜಕೀಯ ಸುದ್ದಿ ಇಲ್ಲದೆ ಇದ್ದರೆ ಪತ್ರಿಕೆ ಆಕರ್ಷಣೆ ಇರುವುದಿಲ್ಲ. ಅದೇ ರೀತಿ ರಾಜಕಾರಣಿಯ ಸುದ್ದಿಗಳು ಪತ್ರಿಕೆಯಲ್ಲಿ ಬರದಿದ್ದರೆ ಆ ರಾಜಕಾರಣಿಗೆ ಅಸ್ತಿತ್ವವೇ ಇಲ್ಲ. ನನಗೆ ಮದನ ಮೋಹನ್ ಅವರು ಮಾರ್ಗದರ್ಶನ ಮಾಡಿದ್ದರು. ಅವರ ಮಾರ್ಗದರ್ಶನದಿಂದ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಚರ್ಚೆ ಮಾಡಿದ್ದೇನೆ. ರಾಮಕೃಷ್ಣ ಹೆಗಡೆ ಅವರು ಮದನ ಮೋಹನ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದಾರಾ ಅಂತ ಕೇಳುತ್ತಿದ್ದರು. ಅವರ ಬಗ್ಗೆ ರಾಜಕಾರಣಿಗಳಿಗೆ ಭಯ ಇತ್ತು ಎಂದರು.

ಯೋಗ್ಯರಿಗೆ ಪ್ರಶಸ್ತಿ :
ಗುರುರಾಜ್ ಅವರು ಉತ್ತರ ಕರ್ನಾಟಕದ ಬಗ್ಗೆ ಸಾಕಷ್ಟು ಲೇಖನಗಳನ್ನು ಬರೆದಿದ್ದಾರೆ. ಅವರು ಎಲ್ಲಿಯೂ ಹೇಳಿಕೊಳ್ಳುವುದಿಲ್ಲ. ಅವರ ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಯೋಗ್ಯ ಪ್ರಶಸ್ತಿ ದೊರೆತಿದೆ. ಅವರಿಗೆ ಅಭಿನಂದನೆ. ಅವರು ನನ್ನಿಂದ ಪ್ರಶಸ್ತಿ ಸ್ವೀಕರಿಸುವ ಆಸೆ ವ್ಯಕ್ತಪಡಿಸಿರುವುದು ನನ್ನ ಮನದಲ್ಲಿ ಯಾವಾಗಲೂ ಉಳಿಯುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ವೂಡೇ ಪಿ. ಕೃಷ್ಣ, ಆಸ್ಸಾಂ ಕೇಂದ್ರಿಯ ವಿವಿ ನಿವೃತ್ತ ಸಮ ಕುಲಪತಿ ಪ್ರೊ. ಕೆ.ವಿ. ನಾಗರಾಜ, ಜಾನಪದ ವಿದ್ವಾಂಸ ಮೀರಾಸಾಬಿಹಳ್ಳಿ ಶಿವಣ್ಣ, ಕೂಡ್ಲಿ ಗುರುರಾಜ್ ಹಾಗೂ ಖಾದ್ತಿ ಶಾಮಣ್ಣ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷ ಎಚ್. ಆರ್.ಶ್ರೀಶ ಸೇರಿದಂತೆ ಅನೇಕ ಹಿರಿಯ ಪತ್ರಕರ್ತರು ಹಾಜರಿದ್ದರು
.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago