ರಾಜ್ಯ

ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ: ಕೆ.ವಿ.ಪ್ರಭಾಕರ್

ಚಿತ್ರದುರ್ಗ : ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ನಮ್ಮ ಹೃದಯಕ್ಕೆ, ಮೆದುಳಿಗೆ ರಕ್ತ ಆಕ್ಸಿಜನ್ ಸಪ್ಲೈ ಮಾಡೋದು ಈ ನರಮಂಡಲವೇ. ಹೀಗೆ ಪತ್ರಿಕೋದ್ಯಮದ ನರಮಂಡಲ ಪತ್ರಿಕಾ ವಿತರಕರು ಎಂದರು.

ನ್ಯೂಸ್ ರೂಮಲ್ಲಿ ಲೇಔಟ್ ಆಗಿ, ಪ್ರಿಂಟಿಂಗ್ ಪ್ರೆಸ್ ನಲ್ಲಿ ಮುದ್ರಣವಾಗುವ ಪತ್ರಿಕೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿರುವ ಓದುಗರ ಮನೆ ಬಾಗಿಲಿಗೆ ತಲುಪಿಸಲು ಪತ್ರಿಕಾ ವಿರತಕರ ನರ ಮಂಡಲ ವ್ಯವಸ್ಥಿತವಾಗಿರಬೇಕು. ನ್ಯೂಸ್ ರೂಮುಗಳು ಎಷ್ಟೇ ಹೈಟೆಕ್ ಆಗಿದ್ದರೂ, ಪ್ರಿಂಟಿಂಗ್ ಪ್ರೆಸ್ ಗಳು ಎಷ್ಟೇ ಅಡ್ವಾನ್ಸ್ ಆಗಿದ್ದರೂ ಪತ್ರಿಕಾ ವಿತರಕರ ನರಮಂಡಲ ಸರಿಯಾಗಿ ಇಲ್ಲ ಅಂದರೆ ಪ್ರಯೋಜನವಿಲ್ಲ ಎಂದು ವಿಶ್ಲೇಷಿಸಿದರು.

ಪತ್ರಿಕಾ ವಿತರಕರು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನಲೆಯುಳ್ಳವರಾಗಿದ್ದು, ವಿದ್ಯಾರ್ಥಿಗಳಿಂದ ವಯಸ್ಕರವರೆಗೂ ಪ್ರತಿನಿತ್ಯ ಸೂರ್ಯ ಉದಯಿಸುವ ಮೊದಲೇ ಚಳಿ, ಮಳೆ ಎನ್ನದೆ ಪತ್ರಿಕೆಯನ್ನು ಮನೆ ಮನೆ ತಲುಪಿಸುತ್ತಾರೆ.

ಪತ್ರಿಕೆ ವಿತರಕ ವಿದ್ಯಾರ್ಥಿಗಳು ಓದಿನ ಜೊತೆಗೆ ದುಡಿಮೆಯಲ್ಲೂ ತೊಡಗುತ್ತಾರೆ. ಇದು ಅವರ ಕುಟುಂಬಕ್ಕೆ ಮತ್ತು ನಾಡಿನ ಆರ್ಥಿಕತೆಗೂ ಅವರ ಪಾಲಿನ ಕೊಡುಗೆ ಕೊಟ್ಟಂತೆ ಎಂದರು.

ಪತ್ರಿಕೆ ವಿತರಕರ ಸಮಗ್ರ ಕಲ್ಯಾಣಕ್ಕೆ ಪ್ರತ್ಯೇಕ ನಿಧಿ ಸ್ಥಾಪನೆ ಮಾಡಬೇಕು. ಉಚಿತ ಪಡಿತರ, ವಿದ್ಯಾರ್ಥಿ ವೇತನ ನೀಡಬೇಕು. ಜೀವವಿಮೆ, ಹೆಲ್ತ್ ಕಾರ್ಡ್ ನೀಡಬೇಕು. ಬೈಕ್/ ಸೈಕಲ್ ಖರೀದಿಸಲು ಶೇ.50 ರಷ್ಟು ರಿಯಾಯ್ತಿ ಒದಗಿಸಬೇಕು, ಜರ್ಕೀನ್ ಗಳನ್ನು ಒದಗಿಸಬೇಕು. ಜೀವ ವಿಮೆ ಮಾಡಿಸಿಕೊಡಬೇಕು ಎನ್ನುವ ಬಹು ವರ್ಷಗಳ ಬೇಡಿಕೆಗಳಿವೆ.

ಎಲ್ಲವನ್ನೂ ಸರ್ಕಾರವೇ ನೇರವಾಗಿ ಒದಗಿಸುವುದು ಕಷ್ಟ.

ಹೀಗಾಗಿ ನಾನು ಕೊಡುವ ಸಲಹೆ ಅಂದರೆ…

ಮಾಧ್ಯಮ‌ ಸಂಸ್ಥೆಗಳು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR fund ಬಳಸಿಕೊಂಡು ಈ ಬೇಡಿಕೆಗಳಲ್ಲಿ ಬಹಳಷ್ಟನ್ನು ಈಡೇರಿಸಬಹುದು.

ನಾನೂ ಕೂಡ ಮಾಧ್ಯಮ ಸಂಸ್ಥೆಗಳು, ಸರ್ಕಾರ ಮತ್ತು ಖಾಸಗಿ ಕಂಪನಿಗಳ ಸಹಯೋಗದಲ್ಲಿ CSR Fund ನೆರವಿನಿಂದ ಏನೆಲ್ಲಾ ಮಾಡಬಹುದು ಎನ್ನುವ ಬಗ್ಗೆ plan ಮಾಡುತ್ತಿದ್ದೇನೆ.
ಮುಂದಿನ ದಿನಗಳಲ್ಲಿ ಇವೆಲ್ಲಾ ಸಾಕಾರಗೊಳ್ಳಬಹುದು ಎನ್ನುವ ನಿರೀಕ್ಷೆ ಇದೆ ಎನ್ನುವ ಮಾತುಗಳನ್ನಾಡಿದರು.

ತರಳಬಾಳು ಶ್ರೀಗಳಾಗದ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಆರ್ ಎಲ್ ಸಮೂಹ ಸಂಸ್ಥೆಗಳ ಮಾಲೀಕರಾದ ವಿಜಯ ಸಂಕೇಶ್ವರರು ಸೇರಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago