ರಾಜ್ಯ

ಜನ ಸಾಮಾನ್ಯರ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು.

ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಲಹೆ ನೀಡಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಹಣವಂತರು, ಅತೀ ಶ್ರೀಮಂತರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ , ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದು ವಿನಂತಿಸಿದರು.

ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದು ವಿವರಿಸಿದರು.

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ದ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದು ಆಶಿಸಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು KUWJ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.

ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಇ.ಎಂ.ಮಂಜುನಾಥ್ ಸಮ್ಮೇಳನದ ಆಶಯ ನೀಡಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಭರವಸೆ ನೀಡಿದರು.

 

 

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

5 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

8 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

8 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

8 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

8 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

8 hours ago