Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚನ್ನಪಟ್ಟಣ ಉಪ ಚುನಾವಣೆ: ಸಿಪಿ ಯೋಗೀಶ್ವರ್‌ಗೆ ಜೆಡಿಎಸ್‌ ಟಿಕೆಟ್‌ ನೀಡಲು ನಡ್ಡಾ ಸಂದೇಶ

ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಿಪಿ ಯೋಗೇಶ್ವರ್‌ಗೆ ಜೆಡಿಎಸ್‌ ಟಿಕೆಟ್‌ ನೀಡಿ ಎಂದು ಸಲಹೆ ನೀಡಿದ್ದರು ಎಂಬ ವಿಷಯವನ್ನು ಹೊರಹಾಕಿದ್ದಾರೆ.

ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಯೋಗೇಶ್ವರ್‌ ಅವರಿಗೆ ರಾಜೀನಾಮೆ ಕೊಟ್ಟು ಜೆಡಿಎಸ್‌ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್‌ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಹೇಳುತ್ತಾ ಕಿಡಿಕಾರಿದರು ಎಚ್‌ ಡಿ ಕುಮಾರಸ್ವಾಮಿ.

ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ,‌ ಇನ್ನು ಮೂರು ದಿನ‌ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.

ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

 

Tags: