ಮೈಸೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಕುರಿತು ಮಾತನಾಡಿರುವ ಎಚ್‌ಡಿ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಿಪಿ ಯೋಗೇಶ್ವರ್‌ಗೆ ಜೆಡಿಎಸ್ ಟಿಕೆಟ್ ನೀಡಿ ಎಂದು ಸಲಹೆ ನೀಡಿದ್ದರು ಎಂಬ ವಿಷಯವನ್ನು ಹೊರಹಾಕಿದ್ದಾರೆ.
ನವದೆಹಲಿಯಲ್ಲಿ ಭೇಟಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಯೋಗೇಶ್ವರ್ ಅವರಿಗೆ ರಾಜೀನಾಮೆ ಕೊಟ್ಟು ಜೆಡಿಎಸ್‌ನಿಂದ ಚುನಾವಣೆಗೆ ನಿಲ್ಲುವುದಕ್ಕೆ ಹೇಳುತ್ತೇವೆ ಎಂದು ಹೇಳಿದ್ದರು. ನಾನು ಈ ಸಂಬಂಧ ಉಳಿಯಬೇಕು, ಒಂದು ಸ್ಥಾನ ಮುಖ್ಯವಲ್ಲ, ಎನ್‌ಡಿಎ ಮೈತ್ರಿ ಗೆಲ್ಲಬೇಕು ಎಂದು ಹೇಳುತ್ತಲೇ ಇದ್ದೇನೆ. ಮೋದಿ, ಅಮಿತ್ ಶಾ, ನಡ್ಡಾ ಅವರಂತಹ ನಾಯಕರ ಜತೆ ಸಂಬಂಧ ಕಡಿದುಕೊಳ್ಳಬೇಕಾ? ಎಂದು ಹೇಳುತ್ತಾ ಕಿಡಿಕಾರಿದರು ಎಚ್ ಡಿ ಕುಮಾರಸ್ವಾಮಿ.
ದೆಹಲಿಯ ಬಿಜೆಪಿ ನಾಯಕರು ಜೆಡಿಎಸ್ ಪಕ್ಷಕ್ಕೆ ಬಹಳ ಗೌರವ ಕೊಟ್ಟಿದ್ದಾರೆ. ನನಗೆ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದಾರೆ. ಏನೇ ಮನವಿ ಮಾಡಿದರೂ ತಕ್ಷಣ ಸ್ಪಂದಿಸುತ್ತಿದ್ದಾರೆ. ನಿಮ್ಮ ಭಾವನೆಗಳಿಗೆ ಧಕ್ಕೆ ಆಗದಂತೆ ನಿರ್ಧಾರ ಮಾಡುತ್ತೇನೆ. ನಿಮ್ಮ ಮಾತಿಗೆ ಗೌರವ ನೀಡುತ್ತೇನೆ. ಕಾರ್ಯಕರ್ತರು ಒಟ್ಟಾಗಿರಿ, ಯಾರಿಗೂ ತಲೆಬಾಗಬೇಕಿಲ್ಲ. ಗೌರವಕ್ಕೆ ತಲೆಬಾಗೊಣ, ಇನ್ನು ಮೂರು ದಿನ ಸಮಯ ಇದೆ. ನನ್ನ ಕಾರ್ಯಕರ್ತರ ಭಾವನೆಯೇ ಅಂತಿಮ. ಸಮಯ ಕೊಡಿ ಎಂದು ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಮನವಿ ಮಾಡಿಕೊಂಡರು.
ಕಾಂಗ್ರೆಸ್ ಪಕ್ಷದವರು ಕುತಂತ್ರ ಮಾಡಿ ನಮ್ಮ ಪಕ್ಷವನ್ನು ಪಾತಾಳಕ್ಕೆ ತುಳಿದಿದ್ದಾರೆ. ಅವರು ತುಳಿದಷ್ಟೂ ನಾವು ಪ್ರಬಲವಾಗಿ ಎದ್ದು ಬಂದಿದ್ದೇವೆ. ಲೋಕಸಭೆ ಚುನಾವಣೆಗೆ ಮೊದಲು ಜೆಡಿಎಸ್ ಮುಗಿದೇ ಹೋಯಿತು ಎಂದು ಜಾಗಟೆ ಹೊಡೆಯುತ್ತಿದ್ದರು. ಈಗ ಇದೇ ಕುಮಾರಸ್ವಾಮಿ ಏನು ಎನ್ನುವುದು ಅವರಿಗೆ ಅರ್ಥವಾಗಿದೆ. ಇಂಥ ಕಾಂಗ್ರೆಸ್ ನವರಿಗೆ ನಾನು ಹೆದರಲ್ಲ. ಚಿನ್ನದಂತಹ ಕಾರ್ಯಕರ್ತರು ಇದ್ದೀರಿ. ಧೈರ್ಯವಾಗಿ ಚುನಾವಣೆ ಎದುರಿಸೋಣ. ಇದೊಂದು ಅಗ್ನಿಪರೀಕ್ಷೆ ನಿಜ, ಹಾಗಂತ ಎದೆಗುಂದಬೇಕಿಲ್ಲ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…