ರಾಜ್ಯ

41 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ: ನಾಳೆ 31 ಜಿಲ್ಲೆಗಳಲ್ಲಿಯೂ ಕರವೇ ಪ್ರತಿಭಟನೆ

ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸರ್ಕಾರದ ನಡೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಸದೀಯ ರಾಜ್ಯ ಭಾಷಾ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮ ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಒಂದು ಬ್ಯಾನರ್ ಮಾತ್ರ ಕಿತ್ತು ಹಾಕಿದ್ದಾರೆ. ಸುಳ್ಳು ಆರೋಪ ಹೊರಿಸಿ 41 ಜನ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವ ಕೆಲಸವನ್ನು ಸರ್ಕಾರ ಮಾಡಿದೆ.

ಇದನ್ನೂ ಓದಿ:-ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್‌ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಹೋಟೆಲ್‍ವೊಂದರಲ್ಲಿ ಕೇಂದ್ರ ಸರ್ಕಾರದ ರಾಜ್ಯ ಭಾಷಾ ಸಮಿತಿ ಮೂರು ದಿನದ ಕಾರ್ಯಕ್ರಮ ಆಯೋಜಿಸಿತ್ತು. ಅಲ್ಲಿ ಆರು ಜನ ಸಂಸದರು ಭಾಗಿಯಾಗಿದ್ದರು. ನಾವು ಹೋಗಿ ಕಾರ್ಯಕ್ರಮದ ಬ್ಯಾನರ್ ಹರಿದುಹಾಕಿದ್ದು ನಿಜ. ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಾಳೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. 76 ಲಕ್ಷ ಕಾರ್ಯಕರ್ತರಿದ್ದಾರೆ. ಎಲ್ಲರನ್ನೂ ಜೈಲಿಗೆ ಕಳುಹಿಸಲು ಸಾದ್ಯವೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ತಮಿಳುನಾಡಿನ ಸಂಸದರು ಹಿಂದಿ ಹೇರಿಕೆ ಬಗ್ಗೆ ಪ್ರತಿಭಟಿಸುತ್ತಾರೆ. ಆದರೆ ನಮ್ಮ ಸಂಸದರು ಯಾವುದೇ ಪ್ರತಿಭಟನೆ ಮಾಡುವುದಿಲ್ಲ. ಕೂಡಲೇ ನಮ್ಮ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಹಿಂದಿ ಹೇರಿಕೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ | ವಿವಿಧ ಸೇವೆಗಳಿಂದ 1.16ಕೋಟಿ ಸಂಗ್ರಹ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…

8 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

2 hours ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

2 hours ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

2 hours ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

3 hours ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

3 hours ago