ಬೆಂಗಳೂರು : ಸೂರಜ್ ರೇವಣ್ಣ ವಿರುದ್ಧ ಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ ೧೮ರವರೆಗೆ ಸೂರಜ್ ಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ೪೨ನೇ ಎಸಿಎಂಎಂ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ.
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಹೊಳೆನರಸೀಪುರ ಠಾಣೆಯ ಪೊಲೀಸರು ಜೂನ್ ೨೨ ರಂದು ಸೂರಜ್ ನನ್ನ ಬಂಧಿಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ತಂಡಕ್ಕೆ ವಹಿಸಿತ್ತು. ಬಳಿಕ ಸೂರಜ್ ನನ್ನ ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಕಸ್ಟಡಿ ಅಂತ್ಯವಾಗಿದ್ದರಿಂದ ನ್ಯಾಯಾಲಯಕ್ಕೆ ಪೊಲೀಸರು ಆರೋಪಿ ಸೂರಜ್ ನನ್ನ ಹಾಜರ್ ಪಡಿಸಿದ್ದು, ಜುಲೈ ೧೮ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
ಅಲ್ಲದೆ ಸೂರಜ್ ರೇವಣ್ಣಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿದೆ.