ರಾಜ್ಯ

ಜುಲೈ.29ಕ್ಕೆ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸಲಿರುವ ಸಿಎಂ ಸಿದ್ದರಾಮಯ್ಯ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ.

ಕಾವೇರಿ ಜಲಾನಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.

ಇನ್ನು ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜುಲೈ.29ರಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಬಾಗಿನ ಸಲ್ಲಿಸಲಿದ್ದಾರೆ. ಅಂದು ಡಿಸಿಎಂ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರು ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಗಳು ಕೂಡ ಪಾಲ್ಗೊಳ್ಳಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ್‌, ತಹಶೀಲ್ದಾರ್‌ ಪರಶುರಾಮ ಸತ್ತಿಗೇರಿ ಸೇರಿದಂತೆ ಹಲವರು ಜಲಾಶಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮ ಹಾಗೂ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago