ಬೆಂಗಳೂರು : ಬದುಕು ಸೆಂಟರ್ ಫಾರ್ ಲೈವಿಹುಡ್ಸ್ ಲರ್ನಿಂಗ್ ಸಂಸ್ಥೆ ವತಿಯಿಂದ ‘ಅಭಿವ್ಯಕ್ತಿ’ ಹೆಸರಿನ 9 ತಿಂಗಳ ಪತ್ರಿಕೋದ್ಯಮ ಡಿಪ್ಲೊಮಾ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಕನಕಪುರ ರಸ್ತೆ ಬಳಿಯ ಬಂಜಾರ ಪಾಳ್ಯದಲ್ಲಿರುವ ಪರಿಸರ ಸ್ನೇಹಿ ಕ್ಯಾಂಪಸ್‌ನಲ್ಲಿ ವಸತಿ ಸಹಿತ (ರೆಸಿಡೆನ್ಸಿಯಲ್) ಕೋರ್ಸ್ ತರಬೇತಿ ನಡೆಯಲಿದೆ. ಪತ್ರಿಕೆ, ಸುದ್ದಿ ವಾಹಿನಿ, ಮನರಂಜನಾ ವಾಹಿನಿ, ಸಿನಿಮಾ, ಡಿಜಿಟಲ್ ಮೀಡಿಯಾದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವ, ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ಯುವಜನರು ಅರ್ಜಿ ಸಲ್ಲಿಸಬಹುದು. ಯುವತಿಯರಿಗೆ ವಿಶೇಷ ಆದ್ಯತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಸ್ಕಾಲರ್‌ಶಿಪ್ ನಿಡಲಾಗುತ್ತದೆ.
ಕೋರ್ಸ್‌ನಲ್ಲಿ ವರದಿಗಾರಿಕೆ, ಬರವಣಿಗೆಗೆ ಬೇಕಾದ ದೃಷ್ಟಿಕೋನ, ತಾಂತ್ರಿಕ ಕೌಶಲ್ಯದ ಜೊತೆಗೆ ಪ್ರಾಯೋಗಿಕ ಕಲಿಕೆ, ಸುದ್ದಿ ಸಂಪಾದನೆ, ಭಾಷಾಂತರದ ಜತೆಗೆ ಕಿರುತೆರೆ-ಹಿರಿತೆರೆಗಳಿಗೆ ಸೃಜನಶೀಲ ಸ್ಕಿಪ್ಟ್ ಬರವಣಿಗೆಯ ಪ್ರಾಯೋಗಿಕ ಕಲಿಕೆ, ಕ್ಯಾಮೆರಾ ನಿರ್ವಹಣೆ, ವಿಡಿಯೊ ಎಡಿಟಿಂಗ್, ಪೇಜ್ ಡಿಸೈನಿಂಗ್ (ಪ್ರಿಂಟ್ / ವೆಬ್) ಬಗ್ಗೆ ಅನುಭವಿ ತಂತ್ರಜ್ಞರಿಂದ ತರಗತಿಗಳು ಇರಲಿವೆ. ಮೊಬೈಲ್ ಜರ್ನಲಿಸಮ್, ವೆಬ್‌ಸೈಟ್, ಸೋಷಿಯಲ್ ಮೀಡಿಯಾ ಹ್ಯಾಂಡ್ಲಿಂಗ್, ಆನ್‌ಲೈನ್ ಜರ್ನಲಿಸಮ್‌ನ ಆಧುನಿಕ ತಂತ್ರಜ್ಞಾನದ ಕೌಶಲ್ಯ ಕಲಿಕೆಯ ಜತೆಗೆ ಇಂಗ್ಲಿಷ್ ಭಾಷೆ, ಭಾಷಾಂತರ ಕಲೆ, ವರದಿಗಾರಿಕೆ, ಬರವಣಿಗೆ ಮುಂತಾದ ಕೌಶಲಗಳ ಪ್ರಾಯೋಗಿಕ ಕಲಿಕೆಯನ್ನು ಕೋರ್ಸ್‌ನಲ್ಲಿ ಕಲಿಸಲಾಗುತ್ತದೆ.
ಅರ್ಜಿ ಸಲ್ಲಿಸಲು ಜು.31 ಕೊನೆಯ ದಿನಾಂಕ. ಆಗಸ್ಟ್ ತಿಂಗಳಿನಲ್ಲಿ ಪ್ರವೇಶ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಸಕ್ತರು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬುಹುದು.





